ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಕುರಿತಂತೆ ನಾಳೆ ಅಂತಿಮ ತೀರ್ಪು ಪ್ರಕಟಗೊಳ್ಳಲಿದೆ.
ಬಿ ರಿಪೋರ್ಟ್ ಕುರಿತಂತೆ ಜಾರಿ ನಿರ್ದೇಶನಾಲಯ (ED) ತಕರಾರು ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಅಂತಿಮ ತೀರ್ಪು ಪ್ರಕಟಿಸಲಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದು, ಕಳೆದ ಫೆಬ್ರವರಿಯಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ರಿಪೋರ್ಟ್‌ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಸೋದರಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂಮಾಲೀಕ ದೇವರಾಜು ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯಗಳ ಕೊರತೆಯಿದೆ ಎಂದು ತಿಳಿಸಲಾಗಿತ್ತು.
ಇನ್ನೊಂದೆಡೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಕೂಡ ಲೋಕಾಯುಕ್ತ ಬಿ ರಿಪೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅದರ ತೀರ್ಪು ಕೂಡ ನಾಳೆ ಪ್ರಕಟಗೊಳ್ಳಲಿದೆ.