ಸಿದ್ದೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ: ಅಂತಿಮ ನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಿಗೆ, ರಾಜ್ಯ ಸರ್ಕಾರದಿಂದ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಸಾರ್ವಜನಿಕರ ಅಂತಿನ ದರುಶನದ ಬಳಿಕ, ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಲಿಂಗೈಕ್ಯರಾದಂತ ಸಿದ್ದೇಶ್ವರ ಶ್ರೀಗಳ ಪಾರ್ಥೀವ ಶರೀರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದರು.

ಈ ಬಳಿಕ ಪೊಲೀಸ್ ಬ್ಯಾಂಡ್ ನೊಂದಿಗೆ ಕುಶಲ ತೋಪು ಸಿಡಿಸುವ ಮೂಲಕ, ಸಿದ್ದೇಶ್ವರ ಶ್ರೀಗಳಿಗೆ ಸರ್ಕಾರದಿಂದ ಅಂತಿಮ ಗೌರವ ಸಲ್ಲಿಸಲಾಯಿತು.

ನಡೆದಾಡುವ ದೇವರು ‘ಸಿದ್ದೇಶ್ವರ ಶ್ರೀ’ ಅಂತ್ಯಕ್ರಿಯೆಗೆ ಆಶ್ರಮದಲ್ಲಿ ಸಕಲ ಸಿದ್ದತೆ ನಡೆಸಲಾಗುತ್ತಿದ್ದು, ಭಕ್ತರೊಬ್ಬರು ತಮ್ಮ ಹೊಲದಲ್ಲಿ ಬೆಳೆದ 5 ಕ್ವಿಂಟಾಲ್ ಶ್ರೀಗಂಧವನ್ನು ಸಿದ್ದೇಶ್ವರ ಶ್ರೀ’ ಅಂತ್ಯಕ್ರಿಯೆಗೆ ನೀಡಿದ್ದಾರೆ.

ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, ಜ್ಞಾನಯೋಗಾಶ್ರಮದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ. ಶ್ರೀಗಳನ್ನು ಪೂರ್ವ ದಿಕ್ಕಿಗೆ ತಲೆಮಾಡಿ ಮಲಗಿಸಿ ಅಗ್ನಿಸ್ಪರ್ಶ ಮಾಡಲು ಸಕಲ ಸಿದ್ದತೆ ನಡೆಸಲಾಗಿದ್ದು, ಬಲಭಾಗಕ್ಕೆ ಸಿಎಂ ಸೇರಿ ವಿಐಪಿಗಳಿಗೆ ಕೂರಲು ಅವಕಾಶ ಮಾಡಿಕೊಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!