ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ ಹುಕ್ಕೇರಿಮಠದ ಸದಾಶಿವ ಶ್ರೀ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಹಾವೇರಿಯ ಹುಕ್ಕೇರಿಮಠದ ಸದಾಶಿವ ಶ್ರೀಗಳು ಸಂತಾಪ ಸೂಚಿಸಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಸ್ವಾಮೀಜಿ , ನಾಡುಕಂಡ ಜ್ಞಾನಿಗಳಲ್ಲಿ, ತತ್ವಜ್ಞಾನಿಗಳಲ್ಲಿ ಒಬ್ಬರಾಗಿದ್ದರು. ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮ ಪ್ರವಚನಗಳ ಮೂಲಕ ಸಿದ್ದೇಶ್ವರ ಶ್ರೀಗಳು ಮಾರ್ಗದರ್ಶನ ನೀಡುತ್ತಿದ್ದರು. ತಮ್ಮ ವಾಣಿಗಳ ಮೂಲಕ ಜನರಿಗೆ ಮಾರ್ಗದರ್ಶನವನ್ನು ಮಾಡುತ್ತಿದ್ದರು ಎಂದು ಹೇಳಿದರು.

ನಮ್ಮ ಹುಕ್ಕೇರಿಮಠಕ್ಕೆ ಸಿದ್ದೇಶ್ವರ ಶ್ರೀಗಳು ಭೇಟಿ ನೀಡಿದ್ದರು. ಅಲ್ಲದೇ ಹಾವೇರಿ ಸುತ್ತಮುತ್ತ ಹಲವು ಪ್ರವಚನಗಳನ್ನು ನೀಡಿದ್ದರು. ಇಂತಹವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!