ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜನವರಿ 9 ಮತ್ತು 10ರಂದು ವಿಜಯಪುರದಲ್ಲಿ ನಡೆಯಬೇಕಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳವನ್ನು ಮುಂದೂಡಿಕೆ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಆರೋಗ್ಯ ಏರುಪೇರಾಗಿದೆ.ಅವರ ಆರೋಗ್ಯ ಸುಧಾರಿಸುತ್ತದೆ ಎನ್ನುವ ನಮ್ಮೆಲ್ಲರ ನಿರೀಕ್ಷೆ ಫಲಿಸುತ್ತಿಲ್ಲ. ಶ್ರೀಗಳ ಆರೋಗ್ಯ ದಿನೇ ದಿನೇ ಬಿಗಡಾಯಿಸುತ್ತಿದೆ ಎಂಬುದಾಗಿ ಕಳವಳ, ಆತಂಕ ವ್ಯಕ್ತ ಪಡಿಸಿದ್ದಾರೆ.

ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಆರೋಗ್ಯ ಏರುಪೇರಾಗಿರುವ ಕಾರಣದಿಂದ ವಿಜಯಪುರದದಲ್ಲಿ ಜನವರಿ 9 ಮತ್ತು 10ರಂದು ನಡೆಯಲಿರುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಂದೂಡಿಕೆ ಮಾಡಲಾಗಿರೋದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!