ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ನಟಿ ಕಿಯಾರಾ ಅಡ್ವಾಣಿ (Kiara Advani) ಹಾಗೂ ನಟ ಸಿದ್ದಾರ್ಥ್ ಮಲ್ಹೋತ್ರಾ (Sidharth Malhotra) ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇದೀಗ ಮದುವೆ ನಂತರಮೊದಲ ಬಾರಿಗೆ ʻಷೇರ್‌ಷಾʼ ಜೋಡಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.
ಮದುವೆ ಕಾರ್ಯಗಳು ಪೂರ್ಣಗೊಂಡ ಬಳಿಕ ಮುಂಬೈಗೆ ಹೊರಟಿದ್ದಾರೆ. ಈ ವೇಳೆ ಅವರು ಜೈಸಲ್ಮೇರ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.
ಹಲವು ವರ್ಷಗಳ ಪ್ರೀತಿಗೆ ಸಿದ್-ಕಿಯಾರಾ ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ತಮ್ಮ ಪ್ರೀತಿ, ಮದುವೆ ಬಗ್ಗೆ ಅದೆಷ್ಟೇ ಸುದ್ದಿಯಾಗಿದ್ದರೂ ಸೈಲೆಂಟ್ ಇಬ್ಬರು ವೈವಾಹಿಕ ಜೀವನಕ್ಕೆ ಹೊಸ ಜೋಡಿಗೆ ಪಾಪರಾಜಿಗಳು ಶುಭಹಾರೈಸಿದ್ದಾರೆ. ಧನ್ಯವಾದಗಳನ್ನ ತಿಳಿಸಿ ದೆಹಲಿಗೆ ಹಾರಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.