Friday, February 3, 2023

Latest Posts

ಸಿದ್ಧೇಶ್ವರ ಶೀ ಲಿಂಗೈಕ್ಯ: ಕಂಬನಿ ಮಿಡಿದ ಬೀದಿ ಬದಿ ವ್ಯಾಪಾರಿಗಳು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರು ಶ್ರದ್ಧಾಂಜಲಿ ಸಲ್ಲಿಸಿ ಕಂಬನಿ ಮಿಡಿದರು.

ಹುಬ್ಬಳ್ಳಿ ನಗರದ ಜನತಾ ಮಾರುಕಟ್ಟೆಯ ವ್ಯಾಪಾರಸ್ಥರು ಸಿದ್ದೇಶ್ವರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದರು.

ಜಗದೀಶ್​ ಶೆಟ್ಟರ್ ರಿಂದ ಶ್ರದ್ಧಾಂಜಲಿ
ಸಿದ್ಧೇಶ್ವರ ಸ್ವಾಮೀಜಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಶ್ರದ್ಧಾಂಜಲಿ ಅರ್ಪಿಸಿದರು. ಸಿದ್ಧೇಶ್ವರ ಸ್ವಾಮೀಜಿಗಳು ಅಪಾರ ಭಕ್ತ ಸಮೂಹ ಹೊಂದಿದ್ದರು. ತಮ್ಮ ಪ್ರವಚನಗಳ ಮೂಲಕವೇ ಜೀವನದ ಪಾಠ ಹೇಳುತ್ತಿದ್ದರು. ಇಡೀ ರಾಜ್ಯ ಹಾಗೂ ದೇಶಕ್ಕೆ ಅವರು ಮಾದರಿಯಾದವರು. ಅವರ ಪ್ರವಚನ ಕೇಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುತ್ತಿದ್ದರು. ಸ್ವಾಮೀಜಿಗಳಾಗಿದ್ದರೂ ಅವರು ಸರಳ ಜೀವಿಯಾಗಿದ್ದರು. ಅವರ ಅಗಲಿಕೆಯಿಂದ ಇಡೀ ಭಕ್ತ ಸಮೂಹಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!