ಹೊಸದಿಗಂತ ಡಿಜಿಟಲ್ ಡೆಸ್ಕ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವಿನ ವಾಗ್ವಾದ ತೀವ್ರಗೊಂಡಿದೆ. ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಮುಡಾ ಭೂ ಮಂಜೂರಾತಿ ವಿಚಾರದಲ್ಲಿ ನನ್ನ ಮತ್ತು ನನ್ನ ಕುಟುಂಬದ ಪಾತ್ರವಿಲ್ಲ ಎಂದು ಸುಳ್ಳು ಹೇಳಿದ ಸಿದ್ದರಾಮಯ್ಯನವರೇ, ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. 50:50ರ ಅನುಪಾತದಲ್ಲಿಯೇ ಮುಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ’ ಎಂದು ದಾಖಲೆಯನ್ನು ಲಗತ್ತಿಸಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.
ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!’ ಎಂದರೆ ಮುಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಈಗ ಹೇಳಿ, ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ? ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.