ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿರುವ ಹಗರಣಗಳ ಕುರಿತು ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸಲು ಸಮಿತಿ ರಚನೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಪ್ರಗತಿ, ಸಮನ್ವಯ ಇತ್ಯಾದಿಗಳ ಬಗ್ಗೆ ಕ್ರಮ ಕೈಗೊಳ್ಳಲು ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ
ಸಚಿವರುಗಳಾದ ಡಾ.ಜಿ. ಪರಮೇಶ್ವರ, ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ, ಆದೇಶಿಸಲಾಗಿದೆ.