ಮುಸ್ಲಿಂ ಮೀಸಲಾತಿ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿದ್ದು ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಾಗ ಮಾಧ್ಯಮಗಳನ್ನು ಟೀಕಿಸುತ್ತಿದ್ದು, ಇಂದು ಬೀದರ್ ನಲ್ಲಿ ಇಂತಹದೊಂದು ಘಟನೆ ನಡೆದಿದೆ. ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಸಿದ್ದರಾಮಯ್ಯ, ಮುಸ್ಲಿಮರಿಗೆ ಮೀಸಲಾತಿ ಕೋಟಾ ವಿಸ್ತರಣೆ ಮಾಡಿರುವ ಸರ್ಕಾರದ ನಿರ್ಧಾರದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಸಿಡಿದೆದ್ದರು.

1994ರಲ್ಲಿ ಚಿನ್ನಪ್ಪ ರೆಡ್ಡಿ ಸಮಿತಿ ವರದಿ ಪ್ರಕಾರ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ, ಬಸವರಾಜ ಬೊಮ್ಮಯಿ ಸರ್ಕಾರ ಅದನ್ನು ತೆಗೆದುಹಾಕಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ ಬಿಜೆಪಿ ಸರ್ಕಾರ ಕೋರ್ಟ್ ನಲ್ಲಿ ಹೇಳಿದ್ದೇನು ಗೊತ್ತಾ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಸಿಟ್ಟಿಗೆದ್ದ ಅವರು, ವಿಷಯದ ಹಿನ್ನೆಲೆ ತಿಳಿಯದೆ ಪ್ರಶ್ನೆ ಕೇಳುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಬೊಮ್ಮಾಯಿ ಸರಕಾರವು ಮುಸಲ್ಮಾನರ ಮೀಸಲಾತಿಯನ್ನು ರದ್ದು ಮಾಡಲ್ಲ ಎಂದು ನ್ಯಾಯಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟಿತ್ತು ಎಂದು ಹೇಳಿ ಮಾಧ್ಯಮದ ಪ್ರತಿನಿಧಿಗಳು ಸಾರ್ ಸಾರ್ ಎಂದು ಬೇರೆ ಪ್ರಶ್ನೆ ಕೇಳುತ್ತಿದ್ದರೂ ಸಾಕು ನಿಮ್ಮ ಪ್ರಶ್ನೆಗಳು ಅನ್ನುತ್ತಾ ಅಲ್ಲಿಂದ ತಕ್ಷಣ ಎದ್ದು ಹೋಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!