Wednesday, June 7, 2023

Latest Posts

ಮೇ20ಕ್ಕೆ ಸಿದ್ದು ಪ್ರಮಾಣ ವಚನ: ಅಂದೇ ಸಚಿವ ಸಂಪುಟ ರಚನೆ ಸಾಧ್ಯತೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಅಧಿಕೃತವಾಗಿ ಸಿದ್ದರಾಮಯ್ಯ ಕರ್ನಾಟಕದ ಸಿಎಂ ಎಂದು ಕಾಂಗ್ರೆಸ್‌ ಘೋಷಿಸಿದೆ. ಮೇ 20ರಂದು ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ತಯಾರಿ ನಡೆಯುತ್ತಿದೆ. ಅಂದೇ ಸಚಿವ ಸಂಪುಟ ರಚನೆ ಸಾಧ್ಯತೆ ಇದ್ದು ಸಿಎಂ, ಡಿಸಿಎಂ ಜೊತೆ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಮೊದಲ ಹಂತದ ಮಂತ್ರಿ ಮಂಡಲ ಅಸ್ತಿತ್ವ ಬರುವ ಸಾಧ್ಯತೆಯಿದ್ದು, ಸುಮಾರು 10ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಬಗ್ಗೆ ಡಾ.ಪರಮೇಶ್ವರ್​ ಇಂದು ಬೆಳಗ್ಗೆ ರಾಜಭವನದಲ್ಲಿ ರಾಜ್ಯಪಾಲರ ಭೇಟಿ ಮಾಡಿ ಶನಿವಾರದಂದು ಸಿಎಂ, ಡಿಸಿಎಂ ಪದಗ್ರಹಣಕ್ಕೆ ದಿನಾಂಕ ನಿಗದಿ ಮಾಡಲು ಮನವಿ ಮಾಡಿದ್ದಾರೆ. ಈ ಕುರಿತು ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಅಧಿಕೃತ ಪ್ರತಿನಿಧಿಯಾಗಿ ಭೇಟಿ​ ನೀಡಿ ರಾಜ್ಯಪಾಲರಿಗೆ ಕೆಪಿಸಿಸಿ ಅಧ್ಯಕ್ಷರ ಪತ್ರ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!