ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ನಲ್ಲಿ ಇದೀಗ ಸಂಪುಟ ಪುನಾರಚನೆ ಸುದ್ದಿ ಸದ್ದು ಮಾಡುತ್ತಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಲಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ಸಂಪುಟ ಸರ್ಜರಿ ಸುಳಿವು ಕೊಟ್ಟಿದ್ದರು. ದೆಹಲಿಯಲ್ಲಿ ಇಂದು ಹೈಕಮಾಂಡ್ ನಾಯಕರ ಜತೆಗೆ ಆಪರೇಷನ್ ಹಸ್ತ, ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಸಂಪುಟ ಪುನಾರಚನೆ ವಿಚಾರವನ್ನು ಖುದ್ದು ಸಚಿವ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಮತ್ತೊಂದೆಡೆ ದಿನೇಶ್ ಗುಂಡೂರಾವ್ 2 ವರ್ಷಕ್ಕೊಮ್ಮೆ ಸಂಪುಟ ಪುನಾರಚನೆ ಆದರೆ ಒಳ್ಳೆಯದು ಎಂದು ಸಲಹೆ ಕೂಡ ನೀಡಿದ್ದಾರೆ.