Sunday, June 26, 2022

Latest Posts

ಜನಪ್ರಿಯ ಕಿರುತೆರೆ ನಟ, ಬಿಗ್‌ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಹಿಂದಿ ಕಿರುತೆರೆ ಜನಪ್ರಿಯ ನಟ, ಬಿಗ್‌ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ (40) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅನೇಕ ಧಾರಾವಾಹಿಗಳಲ್ಲಿ ನಟಿಸಿರುವ ಸಿದ್ಧಾರ್ಥ್ ಹಿಂದಿ ಟೆಲಿವಿಷನ್ ಇಂಡಸ್ಟ್ರಿಯ ಸ್ಟಾರ್ ಆಗಿದ್ದರು.
ಇತ್ತೀಚೆಗಷ್ಟೇ ಬಿಗ್‌ಬಾಸ್ ಒಟಿಟಿಯಲ್ಲಿ ಗೆಳತಿ ಶೆಹನಾಜ್ ಗಿಲ್ ಜೊತೆ ಸಿದ್ಧಾರ್ಥ್ ಕಾಣಿಸಿಕೊಂಡಿದ್ದರು.
ಕೊನೆಯದಾಗಿ ಏಕ್ತಾ ಕಪೂರ್ ಅವರ ಬ್ರೋಕನ್ ಬಟ್ ಬ್ಯೂಟಿಫುಲ್ 3 ರಿಯಾಲಿಟಿ ಶೋನಲ್ಲಿ ಸಿದ್ಧಾರ್ಥ್ ಕಾಣಿಸಿಕೊಂಡಿದ್ದರು.
ಹಿಂದಿಯ ಬಾಲಿಕಾ ವಧು ಧಾರಾವಾಹಿಯಿಂದ ಜನಪ್ರಿಯತೆ ಪಡೆದ ಸಿದ್ಧಾರ್ಥ್ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. ಸಿದ್ಧಾರ್ಥ್ ಅವರ ಸಾವಿನ ವರದಿಯಾಗುತ್ತಿದ್ದಂತೆ ಅವರ ಸ್ನೇಹಿತರ ಅಭಿಮಾನಿಗಳ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss