February 4, 2026
Wednesday, February 4, 2026
spot_img

ವಿಧಾನಸಭೆಯಲ್ಲಿ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಸಿದ್ದು ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧದ ನಡುವೆಯೂ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ನಿರ್ಣಯ ಅಂಗೀಕರಿಸಿದೆ.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಗಳವಾರ ಮಂಡಿಸಿದ್ದರು. ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಹೇಳಿದ್ದರು.

ಇಂದು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಆದರೆ ಪ್ರತಿಪಕ್ಷ ಸದಸ್ಯರ ಅನುಪಸ್ಥಿತಿಯಲ್ಲೇ ವಿಬಿ-ಜಿ ರಾಮ್ ಜಿ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಅವರು ಹೇಳಿದರು. ಅಲ್ಲದೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !