Thursday, February 9, 2023

Latest Posts

ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಅರೆಸ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್‌
ಪಂಜಾಬಿ ರಾಜಕಾರಣಿ ಹಾಗೂ ಗಾಯಕರಾಗಿ ಹೆಸರು ಮಾಡಿದ್ದ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್‌ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಅರೆಸ್ಟ್‌ ಮಾಡಲಾಗಿದೆ ಎಂದು ಭಾರತದ ಗುಪ್ತಚರ ಸಂಸ್ಥೆಯ ಮೂಲಗಳು ತಿಳಿಸಿವೆ.
ಪಂಜಾಬ್‌ ನ ಅನಾಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ದ ರಾಡಾರ್‌ನಲ್ಲಿದ್ದ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬ್ರಾರ್‌ನ ಗಡೀಪಾರು ಮಾಡಲು ಎಫ್‌ಬಿಐ ಗೆ ಔಪಚಾರಿಕ ವಿನಂತಿ ಸಲ್ಲಿಸಿದೆ.
ಪಂಜಾಬ್‌ನ ಶ್ರೀ ಮುಕ್ತಸರ್ ಸಾಹಿಬ್ ಮೂಲದ ಸತೀಂದರ್‌ಜೀತ್ ಸಿಂಗ್, ಅಲಿಯಾಸ್ ಬ್ರಾರ್, 2017 ರಲ್ಲಿ ವಿದ್ಯಾರ್ಥಿ ವೀಸಾದಲ್ಲಿ ಕೆನಡಾಕ್ಕೆ ಹೋಗಿದ್ದರು ಮತ್ತು ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯರಾಗಿದ್ದಾರೆ. ಕಳೆದ ತಿಂಗಳು ಡೇರಾ ಸಚ್ಚಾ ಸೌದಾ ಅನುಯಾಯಿಯ ಹತ್ಯೆಯ ಪ್ರಮುಖ ಸಂಚುಕೋರನೂ ಆಗಿದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!