ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬಿ ಗಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯನ್ನು 10 ದಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕಸ್ಟಡಿಗೆ ಕೋರ್ಟ್ ನೀಡಿದೆ.
‘ಸಿಧು ಮೂಸೆವಾಲಾ ಹತ್ಯೆ ಹಿಂದೆ ದೊಡ್ಡ ಪಿತೂರಿಯೇ ಇದೆ. ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳ ಪೂರೈಕೆಯಾಗುತ್ತಿದೆ. ಸಿಧು ಅವರಂತಹವರು ಕೆಲವು ಟಾರ್ಗೆಟ್ ಅಷ್ಟೆ. ಹಾಗಾಗಿ, ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿಯನ್ನು ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ’ ಎಂದು ಎನ್ಐಎ ತಿಳಿಸಿತು. ಹೀಗಾಗಿ ಪಟಿಯಾಲ ಹೌಸ್ ಕೋರ್ಟ್ 10 ದಿನ ಕಸ್ಟಡಿಗೆ ನೀಡಿದೆ.
ಮೇ 29ರಂದು ಪಂಜಾಬ್ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಅನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.