ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿಗಣತಿ ವರದಿ-2015) ವರದಿ ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬರೋಬ್ಬರಿ 169 ಕೋಟಿ ರು. ವೆಚ್ಚದಲ್ಲಿ ಸಿದ್ಧಪಡಿಸಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದು, ವರದಿಯಲ್ಲಿನ ಅಂಶಗಳ ಬಗ್ಗೆ ಸದಸ್ಯರೊಂದಿಗೆ ಚರ್ಚಿಸಲಿದ್ದಾರೆ. ವರದಿ ಅನುಷ್ಠಾನದ ಕುರಿತು ಶುಕ್ರವಾರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಕಳೆದ ಕೆಲ ದಿನಗಳ ಹಿಂದೆ ದೆಹಲಿ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇನ್ನಿತರ ನಾಯಕರು ಹೈಕಮಾಂಡ್ ನಾಯಕರೊಂದಿಗೆ ಜಾತಿ ಆಧರಿತ ಜನಗಣತಿ ವರದಿ ಅನುಷ್ಠಾನದ ಕುರಿತು ಚರ್ಚೆ ನಡೆಸಿದ್ದರು. ಹೈಕಮಾಂಡ್ ನಾಯಕರು ಜಾತಿ ಆಧಾರಿತ ಜನಗಣತಿ ವರದಿ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆ ಹಿನ್ನೆಲೆಯಲ್ಲೇ ಜಾತಿ ಆಧಾರಿತ ಜನಗಣತಿ ವರದಿಯನ್ನು ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ.