ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯನವರೇ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಿ ಎಂದು ಖಡಕ್ ಸಂದೇಶ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿಯನ್ನು ಪುಡಾರಿ ಎಂದು ಸಂಬೋಧಿಸಿರುವುದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಪ್ರಧಾನಿಯವರು ಪರಿಸ್ಥಿತಿಯನ್ನು ವಿಶ್ಲೇಷಿಸಿದರು. ಇದಕ್ಕೆ ಸೌಜನ್ಯಯುತವಾಗಿ ಸಮರ್ಥನೆ ಕೊಡಿ. ಅದನ್ನು ಬಿಟ್ಟು ಪುಡಾರಿ ಇತ್ಯಾದಿಯಾಗಿ ಮಾತನಾಡುವುದು ಸರಿಯಲ್ಲ. ಗ್ಯಾರಂಟಿಯಿಂದ ಅಭಿವೃದ್ಧಿ ಎಂಬುದಿಲ್ಲ ಎಂದು ಸ್ವತಃ ಕಾಂಗ್ರೆಸ್ ಸದಸ್ಯರೇ ಹೇಳಿದ್ದಾರೆ.
ನಿಮ್ಮ ಶಾಸಕರೇ ನಿಮ್ಮನ್ನು ವಿರೋಧಿಸಿದರು. ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಬಿಆರ್ ಪಾಟೀಲ್, ಮತ್ತಿತರರು ಹೇಳಿದ್ದಾರೆ. ನಿಮ್ಮ ಶಾಸಕರೇ ಹೇಳುತ್ತಿರುವಾಗ ಪ್ರಧಾನ ಮಂತ್ರಿಗಳು ಅದರ ಬಗ್ಗೆ ಮಾತನಾಡಿದ್ದಾರೆ. ಸೌಜನ್ಯಯುತವಾಗಿ ಉತ್ತರ ಕೊಡಿ ಎಂದು ಕಿಡಿಕಾರಿದ್ದಾರೆ.