ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆಯನ್ನು ನಡೆಸಿದ ಲೋಕಾಯುಕ್ತ ವರದಿಯನ್ನು ಈಗಾಗಲೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ವರದಿಯನ್ನು ತಿರಸ್ಕರಿಸುವಂತೆ ಜಾರಿ ನಿರ್ದೇಶನಾಲಯ, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.
ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಸಾಕಷ್ಟು ಸಾಕ್ಷಿಗಳು ಇವೆ. ನಮ್ಮ ತನಿಖೆಯಲ್ಲಿ ಅವರ ತಪ್ಪುಗಳು ಸಾಬೀತಾಗಿವೆ. ಹೀಗಾಗಿ ಲೋಕಾಯುಕ್ತ ವರದಿ ತಿರಸ್ಕರಿಸಿ ಎಂದು ಇಡಿ 8 ಪುಟಗಳ ತಕರಾರು ಅರ್ಜಿ ಸಲ್ಲಿಸಿದೆ.
ಲೋಕಾಯುಕ್ತ ಅಧಿಕಾರಿಗಳು ನಾವು ನಡೆಸಿದ ತನಿಖಾ ವರದಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ತನಿಖಾ ವರದಿಯನ್ನು ತಿರಸ್ಕರಿಸುವಂತೆ ಇಡಿ ನ್ಯಾಯಾಲಯಕ್ಕೆ ಮನವಿ ಮಾಡಿದೆ.