ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೀಘ್ರವೇ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಾರೆ, ಡಿಸಿಎಂ ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗೋದಿಲ್ಲ ಎಂದು ಖ್ಯಾತ ಜ್ಯೋತಿಷಿಯೊಬ್ಬರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದಂತೆ ಮತ್ತೊಬ್ಬರು ಸಿಎಂ ಆಗುತ್ತಾರೆ ಅಂತಲೂ ಈ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ. ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಎಂಬುವರು ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಶೀಘ್ರವೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಯುತ್ತಾರೆ ಎಂದು ಹೇಳಿದ್ದಾರೆ.
ಇನ್ನು ಸಿದ್ದರಾಮಯ್ಯ ರಾಜೀನಾಮೆ ನಂತರ ಮುಂದಿನ ಕರ್ನಾಟಕದ ಸಿಎಂ ಯಾರಾಗುತ್ತಾರೆ ಎಂಬ ಬಗ್ಗೆಯೂ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ. ಆದರೆ ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕದ ಮುಂದಿನ ಸಿಎಂ ಆಗುತ್ತಾರೆೋ ಅಥವಾ ಆಗುವುದಿಲ್ಲವೋ ಎನ್ನುವ ಬಗ್ಗೆ ಪ್ರಶಾಂತ್ ಕಿಣಿ ಏನೂ ಹೇಳಿಲ್ಲ! ಆದರೆ ಸಿದ್ದರಾಮಯ್ಯ ನಂತರ ಮತ್ತೊಬ್ಬರು ಕರ್ನಾಟಕದ ಸಿಎಂ ಆಗುತ್ತಾರೆ ಅಂತ ಜ್ಯೋತಿಷಿ ಪ್ರಶಾಂತ್ ಕಿಣಿ ಸ್ಫೋಟಕ ಭವಿಷ್ಯದಲ್ಲಿ ಹೇಳಿದ್ದಾರೆ.