ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, June 21, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕರ್ಫ್ಯೂ ನಡುವೆ ಅನಗತ್ಯ ಸಂಚಾರ ಮಾಡಿದ 309 ವಾಹನಗಳು ಸೀಜ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………………..

ದಿಗಂತ ವರದಿ ಮೈಸೂರು:

ಅರಮನೆ ನಗರಿ ಮೈಸೂರಿನಲ್ಲಿ ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಮಹಾಮಾರಿ ಕೊರೋನಾ ವೈರಾಣು ಸೋಂಕು ಹರಡುವಿಕೆ ನಿಯಂತ್ರಿಸಲು ಕರ್ಫೂ್ಯ ಜಾರಿ ಮಾಡಿದ್ದರೂ, ಅದನ್ನು ಉಲ್ಲಂಘಿಸಿ, ಅನಗತ್ಯವಾಗಿ ವಾಹನಗಳಲ್ಲಿ ಸಂಚರಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂತಹವರ ವಾಹನಗಳನ್ನು ಸೀಜ್ ಮಾಡುವ ಮೂಲಕ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದರೂ, ಯಾಕೋ ಜನರು ಎಚ್ಚೆತ್ತುಕೊಳ್ಳುತ್ತಲೇ ಇಲ್ಲ. ಅನಗತ್ಯವಾಗಿ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಒಂದೇ ದಿನ 309 ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ 289 ದ್ವಿಚಕ್ರವಾಹನ, 10 ಕಾರು, 10 ಆಟೋಗಳನ್ನ ಸೀಜ್ ಮಾಡಲಾಗಿದೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದಕ್ಕೆ 241 ಪ್ರಕರಣ ದಾಖಲಾಗಿದೆ.
ಮೈಸೂರಿನಲ್ಲಿ ಪೊಲೀಸರು ತಪಾಸಣೆ ನಡೆಸಿ, ಅನಗತ್ಯವಾಗಿ ಓಡಾಡುತ್ತಿರುವವವರ ವಾಹನ ಸೀಜ್ ಮಾಡುತ್ತಿದ್ದಾರೆ. ಲಾಕ್ ಡೌನ್ ಮುಗಿಯುವವರೆಗೂ ವಾಹನಗಳನ್ನು ವಾಪಸ್ಸು ಕೊಡುವುದಿಲ್ಲ ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss