ವಿಕ್ರಮ್‌, ಪ್ರಗ್ಯಾನ್‌ನಿಂದ ಇನ್ನೂ ಬಾರದ ಸಿಗ್ನಲ್‌: ಸಂವಹನದತ್ತ ಇಸ್ರೋ ಪ್ರಯತ್ನ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿದ ಮಿಷನ್‌ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಚಂದ್ರನ ಮೇಲ್ಮೈಯಲ್ಲಿ ಪ್ರಯೋಗಗಳನ್ನು ನಡೆಸಿದ ನಂತರ ಸ್ಲೀಪ್ ಮೋಡ್ ಗೆ ಹೋಗಿದ್ದು, ಇದೀಗ ಚಂದ್ರನ ದಕ್ಷಿಣ ಧ್ರುವದ ಶಿವಶಕ್ತಿ ಪಾಯಿಂಟ್‌ನಲ್ಲಿ ನಿಂತಿರುವ ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಗ್ಯಾನ್‌ ರೋವರ್‌ಅನ್ನು ಎಬ್ಬಿಸುವ ಪ್ರಯತ್ನವನ್ನು ಇಸ್ರೋ ಮಾಡುತ್ತಿದೆ. ಈ ಕ್ಷಣದವರೆಗೂ ವಿಕ್ರಮ್‌ ಹಾಗೂ ಪ್ರಗ್ಯಾನ್‌ನಿಂದ ಯಾವುದೇ ಸಿಗ್ನಲ್‌ಗಳು ಬಂದಿಲ್ಲ ಎಂದು ಇಸ್ರೋ ತಿಳಿಸಿದೆ.

‘ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅವರನ್ನು ಎಚ್ಚರಿಸಿರುವ ಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಸಂವಹನವನ್ನು ಸ್ಥಾಪಿಸಲು ಪ್ರಯತ್ನಗಳನ್ನು ಮಾಡಲಾಗಿದೆ. ಸದ್ಯದ ಮಟ್ಟಿಗೆ ಅವರಿಂದ ಯಾವುದೇ ಸಿಗ್ನಲ್‌ಗಳು ಬಂದಿಲ್ಲ. ಸಂಪರ್ಕವನ್ನು ಸ್ಥಾಪಿಸುವ ಪ್ರಯತ್ನಗಳು ಮುಂದುವರಿಯುತ್ತವೆ’ ಎಂದು ಇಸ್ರೋ ಟ್ವೀಟ್‌ನಲ್ಲಿ ತಿಳಿಸಿದೆ.

ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್‌ ಮತ್ತು ಕಮಾಂಡ್‌ ಸೆಂಟರ್‌ನಿಂದ ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಗ್ಯಾನ್‌ ರೋವರ್‌ಗೆ ತನ್ನ ಕಮಾಂಡ್‌ಅನ್ನು ನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿರುವ ಅವರಿಬ್ಬರಿಗೂ ಕಮಾಂಡ್‌ ತಲುಪಿದೆಯೇ, ಅವರು ಎಚ್ಚರಗೊಂಡ ಸ್ಥಿತಿಯಲ್ಲಿದ್ದಾರೆಯೇ ಎನ್ನುವುದು ಇನ್ನೂ ಖಚಿತವಾಗಿಲ್ಲ. ಈವರೆಗೂ ಅವರಿಂದ ಯಾವುದೇ ಸಿಗ್ನಲ್‌ಗಳು ಬಂದಿಲ್ಲ. ಸಂಪರ್ಕ ಸಾಧಿಸುವ ಎಲ್ಲಾ ಪ್ರಯತ್ನಗಳು ಮುಂದುವರಿಯಲಿದೆ ಎಂದು ಹೇಳಿದೆ.

14 ದಿನಗಳ ರಾತ್ರಿಯ ನಂತರ ಸೂರ್ಯನ ಬೆಳಕು ಮತ್ತೊಮ್ಮೆ ಚಂದ್ರನ ದಕ್ಷಿಣ ಧ್ರುವವನ್ನು ತಲುಪಲು ಪ್ರಾರಂಭಿಸಿದೆ. ಈ ವೇಳೆ ಸ್ಲೀಪ್ ಮೋಡ್‌ನಲ್ಲಿ ಇರಿಸಲಾದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಎಚ್ಚರಗೊಳಿಸುವ ಭರವಸೆಯನ್ನು ಇಸ್ರೋ ಹೊಂದಿದೆ.
ಇಸ್ರೋ ಸೆಪ್ಟೆಂಬರ್ 4 ರಂದು ಲ್ಯಾಂಡರ್ ಅನ್ನು ಸ್ಲೀಪ್ ಮೋಡ್‌ನಲ್ಲಿ ಇರಿಸಿತ್ತು. ಮೊದಲು ಸೆಪ್ಟೆಂಬರ್ 2 ರಂದು ರೋವರ್ ಅನ್ನು ಸ್ಲೀಪ್ ಮೋಡ್‌ಗೆ ಹಾಕಲಾಯಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!