Tuesday, July 5, 2022

Latest Posts

ಸಹಿ ಸಂಗ್ರಹ ಪದ್ಧತಿ ಬಿಜೆಪಿ ಪಕ್ಷದಲ್ಲಿಲ್ಲ: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಬಾಗಲಕೋಟೆ:

ಭಾರತೀಯ ಜನತಾ ಪಕ್ಷದಲ್ಲಿ ಸಹಿ ಸಂಗ್ರಹ ನಡೆಯುತ್ತದೆ ಎಂಬುದು ಸುಳ್ಳು ಅಂತಹ ವ್ಯವಸ್ಥೆಯೂ ನಮ್ಮ ಪಕ್ಷದಲ್ಲಿ ಇಲ್ಲ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.
ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಹಿ ಸಂಗ್ರಹ, ಒತ್ತಡ, ಒತ್ತಾಯ ಇದೆಲ್ಲಾ ಇಲ್ಲ. ಆ ಪದ್ಧತಿಯೂ ನಮ್ಮ ಪಕ್ಷದಲ್ಲಿ ಇಲ್ಲವೆಂದು ತಿಳಿಸಿದರು.
ಏನೇ ನಿರ್ಧಾರ ತೆಗೆದುಕೊಳ್ಳಬೇಕಾದರೆ ನಮ್ಮ ಪಕ್ಷದಲ್ಲಿ ಹೈ ಕಮಾಂಡ್ ಇದೆ. ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಬೇಕಾದರೆ ಅದೆಲ್ಲಾ ಯೋಚನೆ ಮಾಡಿಕೊಂಡು ತೆಗೆದುಕೊಳ್ಳುತ್ತಾರೆ. ತೀರ್ಮಾಣಗಳಿಗೆ ಪಕ್ಷದವರು ಬದ್ಧರಾಗಿರುತ್ತೇವೆ ಎಂದರು.
ಶಿಸ್ತು ಸಮಿತಿ ರಚನೆ : ಅಧಿಕಾರ ಇದ್ದಾಗ ನೋವು, ಭಾವನೆಗಳನ್ನು ವ್ಯಕ್ತಪಡಿಸಬೇಕೆನ್ನುವುದು ಸಹಜವಾಗಿರುತ್ತದೆ. ಅವೆಲ್ಲಕ್ಕೆ ಪರಿಹಾರ ಕಂಡುಕೊಳ್ಳಲು ಪಕ್ಷದಲ್ಲಿ ಅದಕ್ಕಾಗಿ ಈಗಾಗಲೇ ಒಂದು ಶಿಸ್ತು ಸಮಿತಿ ತಂಡವನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.
ಡಿಸಿಎಂ ಗೋವಿಂದ ಕಾರಜೋಳ, ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾದ್ಯಕ್ಷ ಎಸ್.ಟಿ.ಪಾಟೀಲ , ಪಕ್ಷದ ನಾಯಕರು, ಕಾರ್ಯಕರ್ತರು, ಮುಖಂಡರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss