ಸಹಿ ಫೋರ್ಜರಿ ಆರೋಪ: ರಾಜ್ಯಸಭೆಯಿಂದ ಆಪ್ ಸಂಸದ ರಾಘವ್‌ ಚಡ್ಡಾ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ಸೇವಾ ಮಸೂದೆ ಬಿಲ್‌ ಅಂಗೀಕಾರ ಮುನ್ನ ಸೆಲೆಕ್ಟ್‌ ಕಮಿಟಿಗೆ ಕಳಿಸಬೇಕು ಎನ್ನುವ ನಿಟ್ಟಿನಲ್ಲಿ ಸದಸ್ಯರ ಸಹಿ ಇರುವ ಪತ್ರವನ್ನು ಫೋರ್ಜರಿ ಮಾಡಿದ ಆರೋಪ ಹೊತ್ತಿರುವ ಆಮ್‌ ಆದ್ಮಿ ಪಾರ್ಟಿಯ ಸಂಸದ ರಾಘವ್‌ ಚಡ್ಡಾರನ್ನು ರಾಜ್ಯಸಭಾ ಚೇರ್ಮನ್‌ ಜಗದೀಪ್‌ ಧನ್‌ಕರ್‌ ಅನಿರ್ದಿಷ್ಟಾವಧಿಗೆ ಅಮಾನತು ಮಾಡಿದ್ದಾರೆ.

ವಿಶೇಷಾಧಿಕಾರಿ ಸಮಿತಿ ತನ್ನ ವರದಿಯನ್ನು ಸಲ್ಲಿಸುವವರೆಗೆ ರಾಜ್ಯಸಭೆಯಿಂದ ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 7 ರಂದು ನಿರ್ಣಯದಲ್ಲಿ ನಾಲ್ಕುಸಂಸದರು ತಮ್ಮ ಅನುಮತಿಯಿಲ್ಲದೆ ತಮ್ಮ ಹೆಸರನ್ನು ರಾಘವ್‌ ಚಡ್ಡಾ ಸೇರಿಸಿದ್ದಾರೆ ಎಂದು ಹೇಳಿಕೊಂಡಿದ್ದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಬುಧವಾರ ಈ ವಿಷಯವನ್ನು ಪರಿಶೀಲಿಸಲು ವಿಶೇಷಾಧಿಕಾರ ಸಮಿತಿಗೆ ಸಂಸದರ ದೂರುಗಳನ್ನು ಕಳುಹಿಸಿದ್ದಾರೆ.

ಸಂಸದರಾದ ಸಸ್ಮಿತ್ ಪಾತ್ರ, ಎಸ್ ಫಾಂಗ್ನಾನ್ ಕೊನ್ಯಾಕ್, ಎಂ ತಂಬಿದುರೈ ಮತ್ತು ನರಹರಿ ಅಮೀನ್ ಅವರು, ಆಪ್‌ ಸಂಸದ ರಾಘವ್‌ ಚಡ್ಡಾ ನಮ್ಮನ್ನು ಕೇಳದೆ ಸದನ ಸಮಿತಿಗೆ ತಮ್ಮ ಹೆಸರನ್ನು ಸೇರಿಸಿದ್ದಾರೆ ಎಂದು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!