Monday, October 3, 2022

Latest Posts

ರಸ್ತೆಗೆ ಬಿದ್ದ ಸೂಚನಾ ಫಲಕ: ಬೈಕ್‌ ಸವಾರನ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಮಾರ್ಗಸೂಚಿ ಫಲಕವೊಂದು ಧರೆಗುರುಳಿದ ಪರಿಣಾಮ ಬೈಕ್‌ ಸವಾರನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ ಮತ್ತು ಇನ್ನೊಬ್ಬ ಮಿನಿ ವ್ಯಾನ್‌ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಚೆನ್ನೈನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಪೆರುಂಗಲತ್ತೂರಿನಿಂದ ಕೊಯಂಬೆಡುವಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಸೈನ್‌ಬೋರ್ಡ್‌ಗೆ ಆಧಾರವಾಗಿದ್ದ ಕಬ್ಬಿಣದ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ತಕ್ಷಣ ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಾಳುಗಳನ್ನು ರಕ್ಷಿಸುವಲ್ಲಿ ಸಹಕರಿಸಿದರು. ನಂತರ ಅವರನ್ನು ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದ್ವಿಚಕ್ರವಾಹನ ಸವಾರ ತೊಂಡಿಯಾರ್‌ಪೇಟೆ ಮೂಲದ ಷಣ್ಮುಗಂ ಎಂಬುವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಅಗ್ರಿಗೇಟರ್ ಕಂಪನಿಯೊಂದಿಗೆ ಆಹಾರ ವಿತರಣಾ ಪಾಲುದಾರರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿರುವ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!