July 9, 2026
Thursday, July 9, 2026
spot_img

ಟಿ20 ವಿಶ್ವಕಪ್‌ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ: ರಾಣಾ ಔಟ್, ಸಿರಾಜ್ ಇನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಆರಂಭದ ಹೊಸ್ತಿಲಲ್ಲೇ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಗಾಯದ ಸಮಸ್ಯೆಯಿಂದಾಗಿ ಯುವ ಆಲ್​ರೌಂಡರ್ ಹರ್ಷಿತ್ ರಾಣಾ ಟೂರ್ನಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ.

ಮೊಹಮ್ಮದ್ ಸಿರಾಜ್ ಇಂದು (ಫೆ.7) ಮುಂಬೈನಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಹಣಾಹಣಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ರಾತ್ರಿ 7 ಗಂಟೆಗೆ ನಡೆಯಲಿದೆ.

ಸಿರಾಜ್ ಇಂದು ತಂಡವನ್ನು ಸೇರಿಕೊಳ್ಳುತ್ತಿದ್ದರೂ, ಇಂದಿನ ಪಂದ್ಯದಲ್ಲಿ ಅವರು ಆಡುವುದು ಅನುಮಾನ. ಜಸ್​ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಪ್ರಮುಖ ವೇಗಿಗಳಾಗಿ ಕಣಕ್ಕಿಳಿಯಲಿದ್ದು, ಇವರಿಗೆ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಸಾಥ್ ನೀಡಲಿದ್ದಾರೆ.

ಆರಂಭಿಕ ಪಂದ್ಯದಲ್ಲಿ ವಿಶ್ರಾಂತಿ ಪಡೆದರೂ, ಟೂರ್ನಿಯ ಮುಂದಿನ ಪ್ರಮುಖ ಪಂದ್ಯಗಳಲ್ಲಿ ಮೂರನೇ ವೇಗಿಯಾಗಿ ಸಿರಾಜ್ ತಂಡದ ಬೌಲಿಂಗ್ ಶಕ್ತಿಯನ್ನು ಹೆಚ್ಚಿಸುವುದು ಖಚಿತವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !