spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಸ್ಸಾಂ- ನಾಗಾಲ್ಯಾಂಡ್ ಸರಕಾರದಿಂದ ಮಹತ್ವದ ನಿರ್ಧಾರ: ಗಡಿಯಿಂದ ಪೊಲೀಸ್ ಪಡೆಯನ್ನು ಹಿಂಪಡೆಯಲು ಒಪ್ಪಿಗೆ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಸ್ಸಾಂ ಮತ್ತು ಮಿಜೋರಾಂ ರಾಜ್ಯಗಳ ಗಡಿಯಲ್ಲಿ ಹಿಂಸಾಚಾರ ಒಂದೆಡೆ ನಡೆಯುತ್ತಿದ್ದರೆ , ಇತ್ತ ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಗಳಲ್ಲಿ ನಿಯೋಜಿಸಿದ್ದ ಪೊಲೀಸ್ ಪಡೆಯನ್ನು ಹಿಂಪಡೆಯಲು ಎರಡೂ ಸರ್ಕಾರಗಳು ನಿರ್ಧರಿಸಿವೆ. ಈ ಮೂಲಕ ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಯಲ್ಲೂ ಉಂಟಾಗಿದ್ದ ಆತಂಕದ ವಾತಾವರಣ ತಿಳಿಯಾದಂತಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ, ಇದೊಂದು ಐತಿಹಾಸಿಕ ನಿರ್ಧಾರ ಎಂದಿದ್ದಾರೆ. ಇಂದು ಅಸ್ಸಾಂ ಹಾಗೂ ನಾಗಾಲ್ಯಾಂಡ್ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಸಭೆ ನಡೆಸಿದ್ದರು. ಎರಡೂ ರಾಜ್ಯಗಳ ಗಡಿಯಲ್ಲಿ ರಾಜ್ಯ ಸರ್ಕಾರಗಳು ನಿಯೋಜನೆ ಮಾಡಿರುವ ಪೊಲೀಸ್ ಭದ್ರತಾ ಪಡೆಯನ್ನು ಹಿಂಪಡೆಯುವ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಡೆಸ್ಸೋಯ್ ಮೀಸಲು ಅರಣ್ಯ ಹಾಗೂ ತ್ಸುರಂಗ್​ಕಾಂಗ್ ಕಣಿವೆಯಲ್ಲಿ ಅಸ್ಸಾಂ ಹಾಗೂ ನಾಗಾಲ್ಯಾಂಡ್ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿತ್ತು. ಇದರಿಂದ ಯಾವ ಕ್ಷಣದಲ್ಲಾದರೂ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು ಎಂದ ಆತಂಕ ಗಡಿಭಾಗದ ಜನರಲ್ಲಿ ಮನೆಮಾಡಿತ್ತು.
ಈ ಹಿನ್ನೆಲೆಯಲ್ಲಿ ಟ್ವೀಟ್​​ಗಳನ್ನು ಮಾಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವ, ಅಸ್ಸಾಂ-ನಾಗಾಲ್ಯಾಂಡ್ ಗಡಿಗಳಲ್ಲಿ ಉಂಟಾಗಿದ ಆತಂಕದ ವಾತಾವರಣ ಈಗ ಸರಿಯಾಗಿದೆ. ತಕ್ಷಣದಲ್ಲೇ ಎರಡೂ ರಾಜ್ಯಗಳ ಭದ್ರತಾ ಪಡೆಗಳು ಗಡಿಯ ಬೇಸ್​ ಕ್ಯಾಂಪ್​ನಿಂದ ಹಿಂದೆ ಸರಿಯಲಿವೆ. ಇದು ಅಸ್ಸಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳ ನಡುವಿನ ಸಂಬಂಧ ಬೆಸೆಯಲು ಐತಿಹಾಸಿಕ ನಿರ್ಧಾರವಾಗಿದೆ. ಈ ನಡೆಗಾಗಿ ಮುಖ್ಯಮಂತ್ರಿ ನೀಫ್ಯೂ ರಿಯೋ ಅವರಿಗೂ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಅಸ್ಸಾಂ ಜೊತೆ ಕೈಜೋಡಿಸಿ, ಗಡಿಯಲ್ಲಿ ಶಾಂತಿ ನೆಲೆಸಲು ಕಾರಣರಾಗಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss