ಕೊರೊನಾ ಸೋಂಕಿನಲ್ಲಿ ಗಣನೀಯ ಏರಿಕೆ : 4,041ಹೊಸ ಕೇಸ್‌ ದಾಖಲು, 10 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೇಶದಾದ್ಯಂತ ಕೊರೋನಾ ಸೋಂಕು ಉಲ್ಬಣಿಸಿದ್ದು ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 4,041 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಒಟ್ಟೂ 21,177 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು ದೈನಂದಿನ ಪಾಸಿಟಿವಿಟಿ ದರವು 0.95% ರಷ್ಟಿದೆ. ಒಟ್ಟೂ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಾದ್ಯಂತ ಒಟ್ಟೂ 2,363 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಚೇತರಿಕಾ ದರವು 98.74% ದಷ್ಟಿದೆ.

ದೇಶದಾದ್ಯಂತ ಒಟ್ಟೂ 193.83 ಕೋಟಿ ಲಸಿಕೆ ವಿತರಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!