ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಕೃಷ್ಣಾ ಹಾಗೂ ಅದರ ಉಪನದಿಗಳ ನೀರಿನ ಒಳ ಹರಿವಿನಲ್ಲಿ ಏರಿಕೆಯಾಗಿದೆ.
ಕೃಷ್ಣಾ ನದಿಯ ಒಳ ಹರಿವು 1 ಲಕ್ಷ ಕ್ಯೂಸೆಕ್ ದಾಟಿದೆ. ಸದ್ಯ ಕೃಷ್ಣಾ ನದಿಗೆ 1.9 ಲಕ್ಷ ಕ್ಯೂಸೆಕ್ ಒಳಹರಿವು ದಾಖಲಾಗಿದೆ. ದೂದ್ಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆಯಾಗಿದೆ.
ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 11 ಸೇತುವೆಗಳು ಜಲಾವೃತಗೊಂಡಿದ್ದು, ಪರ್ಯಾಯ ಮಾರ್ಗಗಳ ಮೂಲಕ ಜನರು ಸಂಚಾರ ಮಾಡುತ್ತಿದ್ದಾರೆ.