ಹೊಸದಿಗಂತ ಡಿಜಿಟಲ್ ಡೆಸ್ಕ್:
ರಶ್ಮಿಕಾ ಮಂದಣ್ಣ ನಟಿಸಿದ ‘ಸಿಕಂದರ್’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಜಾಸ್ತಿ ಸದ್ದು ಮಾಡಿಲ್ಲ. ಈ ಬೆನ್ನಲ್ಲೇ ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರದಿಂದ ರಶ್ಮಿಕಾ ಹೊರಬಿದ್ದಿದ್ದಾರೆ ಎನ್ನಲಾದ ಸುದ್ದಿ ಸಿಕ್ಕಾಪಟ್ಟೆ ಚರ್ಚೆ ಆಗ್ತಿದೆ.
ಬ್ಯಾಕ್ ಟು ಬ್ಯಾಕ್ 3 ಸಕ್ಸಸ್‌ಫುಲ್ ಸಿನಿಮಾ ಕೊಟ್ಟು ಗೆದ್ದ ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ಇದ್ದರು ಕೂಡ ‘ಸಿಕಂದರ್’ ಚಿತ್ರ ನಿರೀಕ್ಷೆಯಂತೆ ಯಶಸ್ವಿಯಾಗಿಲ್ಲ.
ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ ಎಂಬ ವಿಚಾರ ಕೇಳಿ ಬಂದಿತ್ತು. ಆದರೆ ಸಿಕಂದರ್ ಸೋಲಿನ ಹಿನ್ನೆಲೆ ಚಿತ್ರತಂಡ ಬೇರೆ ನಾಯಕಿಯನ್ನು ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.