ಹೊಸದಿಗಂತ ಡಿಜಿಟಲ್ ಡೆಸ್ಕ್:
ಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ತೆರೆಗಪ್ಪಳಿಸಿ 3 ದಿನಗಳನ್ನು ಪೂರೈಸಿದೆ. ಮಾರ್ಚ್ 30ರಂದು ಈದ್ ಹಬ್ಬದ ಉಡುಗೊರೆಯಾಗಿ ಬಿಡುಗಡೆಯಾದ ಸಿಕಂದರ್ ತನ್ನ 2 ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂಪಾಯಿ ಮತ್ತು ದೇಶೀಯ ಬಾಕ್ಸ್ ಆಫೀಸ್‌ನಲ್ಲಿ 70 ಕೋಟಿ ರೂಪಾಯಿಗೂ ಹೆಚ್ಚಿನ ವ್ಯವಹಾರ ನಡೆಸಿದೆ.
ಸಿನಿಮಾ ಇಂಡಸ್ಟ್ರಿ ಟ್ರ್ಯಾಕರ್ ಸ್ಯಾಕ್ನಿಲ್ಕ್ ಆರಂಭಿಕ ಅಂದಾಜಿನ ಪ್ರಕಾರ, ಸಿಕಂದರ್ ತನ್ನ ಮೂರನೇ ದಿನ ಗಳಿಕೆಯಲ್ಲಿ ಶೇ.32.76ರಷ್ಟು ಕುಸಿತ ಕಂಡಿದ್ದು, 19.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಭಾರತದ ಒಟ್ಟು ನೆಟ್ ಕಲೆಕ್ಷನ್ 74.5 ಕೋಟಿ ರೂಪಾಯಿಗೆ ತಲುಪಿದೆ.