ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಿಂದ ಇನ್ನೂ ಎರಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ರಾಜ್ಯದಲ್ಲಿ ಉದ್ದಿನಬೇಳೆ, ಸೋಯಾಬೀನ್, ಸೂರ್ಯಕಾಂತಿಗೆ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚಿಸಿದೆ ಎಂದರು.
ನಾಲ್ಕೈದು ದಿನಗಳ ಹಿಂದೆ ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯದ ರೈತರಿಗೆ ಗಣೇಶ ಹಬ್ಬದ ಉಡುಗೊರೆ ಸಿಕ್ಕಿದೆ ಎಂದು ಸಚಿವ ಜೋಶಿ ಹೇಳಿದ್ದಾರೆ.