Friday, December 19, 2025

ಯುವಜನರಲ್ಲಿ ‘ಸೈಲೆಂಟ್ ಕಿಲ್ಲರ್’ ಆತಂಕ: ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಯುವಜನರಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳ ಸರಣಿ ಮುಂದುವರಿದಿದೆ. ಬಾಳಿ ಬದುಕಬೇಕಾದ ಎಳೆಯ ಹೃದಯಗಳು ಕುಳಿತಲ್ಲಿ, ನಿಂತಲ್ಲಿ ಕುಸಿದು ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ. ಇದೇ ರೀತಿ, ಕೇವಲ 22 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವರಾದ ದಿಶಾ, ಶೃಂಗೇರಿ ಪಟ್ಟಣದ ಕಾಲೇಜಿನಲ್ಲಿ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು.

ಘಟನೆ ಇಂದು ಬೆಳಿಗ್ಗೆ ನಡೆದಿದೆ. ಶೃಂಗೇರಿ ಪಟ್ಟಣದ ಹಾಸ್ಟೆಲ್‌ನಲ್ಲಿ ನೆಲೆಸಿದ್ದ ದಿಶಾ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ನೋವಿನ ತೀವ್ರತೆಗೆ ತಕ್ಷಣವೇ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಆರೋಗ್ಯವಂತ ಯುವಜನರೂ ಹೀಗೆ ಅಕಾಲಿಕವಾಗಿ ಪ್ರಾಣ ಕಳೆದುಕೊಳ್ಳುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ.

error: Content is protected !!