ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ‘ಕೈ’ ಮುಖಂಡರ ಮೌನ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಹುಲ್ ಗಾಂಧಿ (Rahul Gandhi) ಅನರ್ಹ ವಿಚಾರವಾಗಿ ಕಾಂಗ್ರೆಸ್ (Congress) ಬುಧವಾರ ದೇಶವ್ಯಾಪಿ ಮೌನ ಪ್ರತಿಭಟನೆ (Protest) ನಡೆ ಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲೂ (Freedom Park) ‘ಕೈ’ ಮುಖಂಡರು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗ್ಗೆ 11 ಗಂಟೆಯಿಂದ ಆರಂಭಗೊಂಡ ಪ್ರತಿಭಟನೆ ಸಂಜೆ 5 ಗಂಟೆಯವರೆಗೂ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar), ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರು, ಎಐಸಿಸಿ ಪದಾಧಿಕಾರಿಗಳು, ಸಂಸದರು ಹಾಗೂ ಶಾಸಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ರಾಹುಲ್ ಗಾಂಧಿಯ ಸತ್ಯದ ನುಡಿಗಳನ್ನು ಸಹಿಸಿಕೊಳ್ಳದ ಪ್ರಧಾನ ಮಂತ್ರಿಗಳು ಅವರ ಮೇಲೆ ಎಲ್ಲಾ ಸೇಡಿನ ಕ್ರಮಗಳನ್ನು ಅನುಸರಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಮತ್ತು ಅನರ್ಹತೆಯನ್ನು ಇಡೀ ರಾಷ್ಟ್ರವೇ ಖಂಡಿಸುತ್ತಿದೆ. ಬಿಜೆಪಿಯ ದ್ವೇಷ ರಾಜಕಾರಣವನ್ನು ಖಂಡಿಸಿ ಈ ಪ್ರತಿಭಟನೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!