ಸೈಲೆಂಟ್ ಸುನಿಲ್ ಬಿಜೆಪಿ ಸೇರಲು ಅವಕಾಶವಿಲ್ಲ: ನಳಿನ್‍ಕುಮಾರ್ ಕಟೀಲ್


ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:

ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶ ನೀಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ಸೈಲೆಂಟ್ ಸುನಿಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.
ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!