ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ರಂಜಿತ್ ಕುಮಾರ್ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ರಂಜಿತ್ ಅವರು ಪ್ರೀತಿಸಿದ ಹುಡುಗಿ ಜೊತೆಗೆ ಎಂಗೇಜ್ ಆಗಿದ್ದಾರೆ. ನಿಶ್ಚಿತಾರ್ಥ ಮಾಡಿಕೊಂಡಿರೋ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ರಂಜಿತ್ ಅವರು ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿಯ ಹೆಸರು ಮಾನಸಾ ಗೌಡ. ಇವರು ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಆಗಿದ್ದಾರೆ. ಸದ್ಯ ಇದೇ ಫೋಟೋಗಳನ್ನು ನೋಡಿದ ಅಭಿಮಾನಿಗಳು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.