ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ಮುಂದುವರಿದಿದ್ದು, ಜನಜೀವನದ ಮೇಲೆ ಗಣನೀಯ ಪರಿಣಾಮ ಬೀರಿದೆ. ಸಾಮಾನ್ಯ ಕನಿಷ್ಠ ತಾಪಮಾನವು 14 ರಿಂದ 15 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಅದರಲ್ಲೂ ವಿಶೇಷವಾಗಿ ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ. ತೀವ್ರ ಚಳಿ ಮತ್ತು ಶೀತ ಗಾಳಿಯ ಕಾರಣದಿಂದಾಗಿ, ಬೆಳಗ್ಗೆ ವಾಕಿಂಗ್‌ಗೆ ಹೊರಡುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ಜನರು ಹೊರಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಡಿಸೆಂಬರ್ 14, 15 ಮತ್ತು 16 ರಂದು ರಾಜ್ಯದಾದ್ಯಂತ ಇದೇ ರೀತಿಯ ಶೀತ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕ: ಈ ಭಾಗದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 9 ರಿಂದ 11 ಡಿಗ್ರಿ ಸೆಂಟಿಗ್ರೇಡ್‌ವರೆಗೂ ತಲುಪುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸುಮಾರು 12 ಡಿಗ್ರಿ ಸೆಲ್ಸಿಯಸ್‌ನ ಆಸುಪಾಸಿನಲ್ಲಿ ಇರಲಿದೆ.

