ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಧವಾರ ದಿನವಿಡೀ ಸುರಿದ ಮಳೆಯಿಂದಾಗಿ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇಂದೂ ಕೂಡ ಮೋಡ ಕವಿದ ವಾತಾವರಣ ಮುಂದವರೆದಿದ್ದು, ವಾರಾಂತ್ಯದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಗರದಲ್ಲಿ ಬುಧವಾರ ಸುರಿದ ಮಳೆಗೆ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದವು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು.
ಮಳೆ ಹಾಗೂ ನೀರು ತುಂಬಿದ್ದ ಪರಿಣಾಮ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಧಾನವಾಗಿತ್ತು. ನೀರಿನಿಂದ ತುಂಬಿದ ಅಂಡರ್‌ಪಾಸ್‌ಗಳಲ್ಲಿ ಸಂಚರಿಸಲು ಸವಾರರು ಹೆಣಗಾಡುವಂತಾಗಿತ್ತು. ಪಾದಚಾರಿಗಳೂ ಕೂಡ ಓಡಾಡಲು ಸಮಸ್ಯೆಗಳನ್ನು ಎದುರಿಸಿದರು.
ಮುಂದಿನ 36 ಗಂಟೆಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಇದು ವಾರಾಂತ್ಯದವರೆಗೆ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.