ಮುಂದುವರಿದ ಭಾರತದ ಪದಕದ ಬೇಟೆ: ಜೂಡೋದಲ್ಲಿ ಸುಶೀಲಾ ದೇವಿಗೆ ಬೆಳ್ಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಮನ್​ವೆಲ್ತ್ ಗೇಮ್ಸ್​​ನಲ್ಲಿ ಭಾರತಕ್ಕೆ‌ ಮತ್ತೊಂದು ಪದಕ ಲಭಿಸಿದೆ. ಜೂಡೋ ಫೈನಲ್‌ನಲ್ಲಿ ಸುಶೀಲಾ ದೇವಿ ಬೆಳ್ಳಿ ಪದಕ ಗೆದ್ದರು. ಇವರು ದಕ್ಷಿಣ ಆಫ್ರಿಕಾದ ಮೈಕೆಲಾ ವೈಟ್‌ಬೂಯಿ ವಿರುದ್ಧ ಪರಾಭವಗೊಂಡಿದ್ದರು.

ಇದು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಸುಶೀಲಾಗೆ ಎರಡನೇ ಬೆಳ್ಳಿ ಪದಕವಾಗಿದೆ. ಈ ಹಿಂದೆ 2014ರಲ್ಲಿ ಅವರು ಬೆಳ್ಳಿ ಪದಕ ಗೆದ್ದಿದ್ದರು.

ಸುಶೀಲಾ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಅನೇಕರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!