Monday, December 22, 2025

ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಕೃಷ್ಣನೂರಿಗೆ ಆಗಮಿಸಿದ್ದು, ಶ್ರೀಕೃಷ್ಣನ ದರುಶನ ಪಡೆದಿದ್ದಾರೆ. ಕರಾವಳಿ ಜನರು ಪ್ರಧಾನಿ ಮೋದಿಯನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದು, ಉಡುಪಿಗೆ ಬಂದ ಪ್ರಧಾನಿ ನರೇಂದ್ರ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ ಮಾಡಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರುಶನ ಪಡೆದಿದ್ದಾರೆ. ದೇವರ ದರುಶನದ ಬಳಿಕ ಹಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ  ಮಾಡಲಾಗಿದೆ. ಪ್ರಧಾನಿ ಮೋದಿಗೆ ಬೆಳ್ಳಿಯ ಕಡೆಗೋಲನ್ನು ಕೊಡುಗೆಯಾಗಿ ನೀಡಲಾಗಿದೆ.

error: Content is protected !!