ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಏಕಾಏಕಿ ಎನ್ಐಎ ದಾಳಿ ನಡೆದಿದೆ. ಉಗ್ರ ಸಂಘಟನೆಗಳ ಚಟುವಟಿಕೆಗೆ ಬಳಕೆ ಮಾಡುತ್ತಿದ್ದ ಡಿಜಿಟಲ್ ಉಪಕರಣಗಳು ಹಾಗೂ ಪ್ರಚೋದನಾಕಾರಿ ವಸ್ತುಗಳನ್ನು ತಪಾಸಣೆ ವೇಳೆ ವಶಕ್ಕೆ ಪಡೆಯಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಹಾಗೂ ತಮಿಳುನಾಡಿನಲ್ಲಿ ಎನ್ಐಎ ದಾಳಿ ನಡೆದಿದೆ.
ಮಹಾರಾಷ್ಟ್ರದ ಮೂರು ಸ್ಥಳಗಳಲ್ಲಿ ಹಾಗೂ ಕರ್ನಾಟಕ, ತಮಿಳುನಾಡು, ಗುಜರಾತ್ನಲ್ಲಿ ಒಂದು ಡಿಜಿಟಲ್ ಸಾಧನವನ್ನು ವಶಪಡಿಸಿಕೊಳ್ಳಲಾಗಿದೆ. ಭಾರತದಲ್ಲಿ ಭಯೋತ್ಪಾದನೆ ಹರಡಲು, ದೇಶದ ಯುವಕರನ್ನು ಭಯೋತ್ಪಾದಕರನ್ನಾಗಿಸಲು ಅಲ್ಖೈದಾ ಮತ್ತು ತೆಹರಿಕ್-ಇ- ತಾಲಿಬಾನ್ ನಡೆಸಿದ ಪಿತೂರಿಗೆ ಸಂಬಂಧಿಸಿದಂತೆ ದಾಳಿ ನಡೆದಿದೆ.