ಒಂದು ವರ್ಷದಿಂದ ಸರ್ಕಾರ ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ: ಸಿದ್ದು ವಿರುದ್ಧ HDK ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಬರಗಾಲ. ನೀರಿನ ಅಭಾವ ಉಲ್ಬಣಿಸಿದೆ. ಪರಿಸ್ಥಿತಿ ಹೀಗಿದ್ದರೂ ಕಾಂಗ್ರೆಸ್ ಸರಕಾರ ಕೋಟ್ಯಂತರ ರೂ. ಜನರ ತೆರಿಗೆ ಹಣವನ್ನು ನೀಡುವ ಮೂಲಕ ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ, ಲಜ್ಜೆಗೇಡು!! ಅಂತ ಹ್ಯಾಶ್​ಟ್ಯಾಗ್​ ಕರ್ನಾಟಕದ_ಝೀರೋ, ಸಿದ್ದನಾಮಿಕ್ಸ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಹೆಚ್​ಡಿಕೆ, “ರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ! ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ!! ರಾಜ್ಯದ ಪಾಲಿನ ಝೀರೋ!! ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ, ಚುನಾವಣೆ ಬಗ್ಗೆ ಮಾತ್ರ ಕಾಳಜಿ. ಈ ಕಾಳಜಿ ನಿಮ್ಮ ಪಕ್ಷ ಮತ್ತು ಸರ್ಕಾರಕ್ಕೆ ಸಮಸ್ಯೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ! ಸುಳ್ಳಾಗದು” ಎಂದು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

“ನಿಮ್ಮ ಸರ್ಕಾರಕ್ಕೆ ಬರ ಪೀಡಿತ ರೈತರಿಗೆ ನೀಡಲು 2,000 ರೂ. ಗತಿ ಇಲ್ಲ. ಆದಾಗ್ಯೂ, ಸಮಾವೇಶಗಳನ್ನು ನಡೆಸಲು ಸಾಕಷ್ಟು ಹಣವಿದೆ. ತುರ್ತು ಸಂದರ್ಭಗಳಲ್ಲಿ ಇರಿಸಿದ್ದ ಜಿಲ್ಲಾಧಿಕಾರಿಗಳು ಮತ್ತು ತಹಸೀಲ್ದಾರ್‌ಗಳ ಪಿಡಿ ಖಾತೆಗಳ ಮೇಲೆ ನಿಮ್ಮ ಸರ್ಕಾರ ದಾಳಿ ಮಾಡಿದೆ. ಜನರ ಹಾಹಾಕಾರವೇ ನಿಮಗೆ ಭರ್ಜರಿ ಆಹಾರ!! ಹೌದಲ್ಲವೇ? ಎಂದು ಪ್ರಶ್ನಿಸುವ ಮೂಲಕ ಸರಣಿ ಟ್ವಿಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!