spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜೂ.14ರಿಂದ 21ರತನಕ ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾ.ಪಂ. ಸೀಲ್ ಡೌನ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………….

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತುಗಳನ್ನು ಜೂ.14ರಿಂದ 21ರ ತನಕ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ವರದಿ ಆಧರಿಸಿ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಪಂಚಾಯತುಗಳನ್ನು ಸೀಲ್ ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ ಮುಂದಿನ ಒಂದು ವಾರಗಳ ಕಾಲ ಸೀಲ್ ಡೌನ್ ಆಗಲಿವೆ.
ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು ಮತ್ತು ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು 17 ಗ್ರಾಮ ಪಂಚಾಯತುಗಳ ಸಾಲಿನಲ್ಲಿ ಸೇರಿವೆ.
ಈ 17 ಗ್ರಾಮ ಪಂಚಾಯತುಗಳಿಗೆ ಹೊರಗಿನಿಂದ ಬರುವವರು ಮತ್ತು ಅಲ್ಲಿಂದ ಹೊರಗೆ ಹೋಗುವವರಿಗೆ ಒಂದಷ್ಟು ನಿರ್ಬಂಧಗಳನ್ನು ವಿಧಿಸಲಾಗಿದೆ. ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯುವ ಸಲುವಾಗಿ ಕಠಿಣ ನಿರ್ಧಾರಕ್ಕೆ ಬರಲಾಗಿದೆ. ನಾಗರಿಕರು ಸಹಕರಿಸಬೇಕು ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್ ವಿನಂತಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss