ಹೊಸದಿಗಂತ ವರದಿ, ವಿಜಯಪುರ:
ಬಿಸಿಲೇರುತ್ತಿದ್ದಂತೆ ಸಿಂದಗಿ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಕಾವು ಪಡೆದುಕೊಂಡಿದ್ದು, ಮಧ್ಯಾಹ್ನ 3 ಗಂಟೆ ವರೆಗೆ ಶೇ.51.60 ರಷ್ಟು ಮತದಾನಗೊಂಡಿದೆ.
ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಪಂ ಸಿಇಒ ಗೋವಿಂದ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು.