Friday, September 19, 2025

ಸಿಂದಗಿಯಲ್ಲಿ ಒಂದೇ ದಿನ 4 ಬಾರಿ ಭೂಮಿ ಕಂಪಿಸಿದ ಅನುಭವ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ನಿನ್ನೆ ಒಂದೇ ದಿನದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ.

ಸಿಂದಗಿ ಪಟ್ಟಣದ ಸುತ್ತಮುತ್ತು ಕಂಪನದ ಅನುಭವ ಆಗಿದ್ದು, ಮಧ್ಯಾಹ್ನ 3 ಗಂಟೆ, ರಾತ್ರಿ 10:11, ಮತ್ತೆ ರಾತ್ರಿ 10:25, ಮತ್ತೊಮ್ಮೆ ರಾತ್ರಿ 10:47 ಒಟ್ಟು 4 ಬಾರಿ ಭೂಮಿ ಕಂಪನಿಸಿದಂತೆ ಭಾಸವಾಗಿದೆ.

ಜೋರಾದ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಸಿಂದಗಿ ಜನರಲ್ಲಿ ಆತಂಕ ಮೂಡಿದ್ದು, ಮನೆ ಬಿಟ್ಟು ಅನೇಕರು ಹೊರಬಂದಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಈ ರೀತಿ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿತ್ತು.

ಇದನ್ನೂ ಓದಿ