ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡುವ ಮೂಲಕ ಪಹಲ್ಗಾಮ್ನ ಉಗ್ರರ ದಾಳಿ ಪ್ರತೀಕಾರವನ್ನು ತೀರಿಸಿಕೊಂಡಿದೆ.
ಈ ಮಧ್ಯೆ ಕೇಂದ್ರ ಸರ್ಕಾರದಿಂದ ಸೂಚನೆ ಹಿನ್ನೆಲೆ ಭಾರತದ ವಿವಿಧೆಡೆ ವಿಮಾನ ಸಂಚಾರ ರದ್ದು ಮಾಡಲಾಗಿದೆ. ಅದೇ ರೀತಿಯಾಗಿ ಬೆಂಗಳೂರಿನಿಂದ ಬೇರೆ ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ರದ್ದು ಮಾಡಲಾಗಿದೆ.
ಸದ್ಯ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು-ಕಾಶ್ಮೀರ, ರಾಜಸ್ಥಾನದ ಜೋಧಪುರ್, ಯುಪಿಯ ಅಯೋಧ್ಯೆ, ಲಖನೌ ಮತ್ತು ಘಾಜಿಯಾಬಾದ್ಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ.