SHOCKING | ಸಹೋದರನ 3 ವರ್ಷದ ಮಗುವನ್ನು ಕತ್ತು ಸೀಳಿ ಕೊಂದ ಪಾಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವ್ಯಕ್ತಿಯೊಬ್ಬ ತನ್ನ ಸಹೋದರನ 3 ವರ್ಷದ ಮಗುವನ್ನೇ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವುದು ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ.

ಮಾರುತಿ ವಾಲಿಕಾರ ಎಂಬವರ 3 ವರ್ಷದ ಮಗು ಅಂಗನವಾಡಿಗೆ ತೆರಳಿತ್ತು. ಈ ವೇಳೆ, ಮಾರುತಿಯ ಸಹೋದರ ಭೀಮಪ್ಪ ವಾಲಿಕಾರ ಅಲ್ಲಿಗೆ ತೆರಳಿ, ಅಂಗನವಾಡಿಯ ಹಿಂಭಾಗದಲ್ಲಿ ಮಗುವಿನ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ದ್ವೇಷದಿಂದ ಈ ರೀತಿ ಮಾಡಿರಬಹುದು ಎನ್ನಲಾಗಿದೆ. ಆದರೆ ಕಾರಣ ಇನ್ನೂ ಬಹಿರಂಗವಾಗಿಲ್ಲ.

ಈ ಸಂಬಂಧ ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!