ಚುನಾವಣಾ ಅಖಾಡಕ್ಕಿಳಿದ ‘ಸಿಂಗಂ’: ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಕೊಯಮತ್ತೂರಿನ ಕೊನಿಯಮ್ಮನ್ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಇದೇ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಯಮತ್ತೂರಿನ ಜನ ನನ್ನ ಮೇಲೆ ಪ್ರೀತಿ ತೋರಿದ್ದಾರೆ. ಇಲ್ಲಿನ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಚಿತ್ರಣವಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!