October 16, 2026
Friday, October 16, 2026
spot_img

ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ‘ಸಿಂಗಂ’ ನಡೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಅಣ್ಣಾಮಲೈ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಕಾರಣದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ನಡೆ ಸಂಚಲನ ಮೂಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ನಿತಿನ್ ನಬಿನ್ ಭೇಟಿಯಾದ ಅಣ್ಣಾಮಲೈ

ಆದಾಗ್ಯೂ, ಕೆ. ಅಣ್ಣಾಮಲೈ ಇನ್ನೂ ಔಪಚಾರಿಕವಾಗಿ ಬಿಜೆಪಿಗೆ ರಾಜೀನಾಮೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಇದರ ನಡುವೆ ಅಮಿತ್ ಶಾ ಅವರನ್ನು ಭೇಟಿಯಾಗಿ ಮುಂದಿನ ರಾಜಕೀಯದ ಕುರಿತು ಮಾತುಕತೆ ನಡೆಸಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಮತ್ತು ಹಿರಿಯ ನಾಯಕ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಕುರಿತು ಚರ್ಚೆ ನಡೆಸಿದ್ದಾರೆ.

ಈಗಾಗಲೇ ಕೆ. ಅಣ್ಣಾಮಲೈ ಹೊಸ ರಾಜಕೀಯ ಪಕ್ಷ ಕಟ್ಟಲಿದ್ದಾರೆ ಎಂಬ ವದಂತಿಗಳು ದಟ್ಟವಾಗಿ ಹರಿದಾಡುತ್ತಿದ್ದು, ಈ ಹೊತ್ತಿನಲ್ಲೇ ಈ ಹೈ-ಪ್ರೊಫೈಲ್ ಭೇಟಿ, ಅವರ ಮುಂದಿನ ರಾಜಕೀಯ ಭವಿಷ್ಯದ ಕುರಿತಾದ ಚರ್ಚೆಗಳನ್ನು ರಾಷ್ಟ್ರ ಮಟ್ಟದಲ್ಲಿ ಮತ್ತಷ್ಟು ತೀವ್ರಗೊಳಿಸಿದೆ.

ಮುಂದಿನ ನಡೆ ಸಸ್ಪೆನ್ಸ್

ಸೋಮವಾರವಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಅಣ್ಣಾಮಲೈ, ಇನ್ನು ಎರಡು ದಿನ ಕಾಯಿರಿ. ಒಟ್ಟಿಗೆ ಕುಳಿತು ಈ ಬಗ್ಗೆ ಸುದೀರ್ಘವಾಗಿ ಮಾತನಾಡೋಣ ಎಂದು ಹೇಳುವ ಮೂಲಕ ತಮ್ಮ ಮುಂದಿನ ನಿಲುವನ್ನು ಸಸ್ಪೆನ್ಸ್ ಆಗಿ ಇಟ್ಟಿದ್ದರು.

Must Read