ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತಕ್ಕೆ ಮೂರು ದಿನಗಳ ಭೇಟಿ ನೀಡಿರುವ ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.
ವಾಂಗ್ ಅವರ ಭಾರತ ಭೇಟಿಯು ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ 60 ನೇ ವರ್ಷಾಚರಣೆಯನ್ನು ಸೂಚಿಸುತ್ತದೆ. ಇದಕ್ಕೂ ಮುನ್ನ, ಸಿಂಗಾಪುರದ ಪ್ರಧಾನಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರನ್ನು ಭೇಟಿಯಾದರು.