Tuesday, February 27, 2024

ಗಾಯಕಿ ಲತಾ ಮಂಗೇಶ್ಕರ್​​ ಗೆ ತೀವ್ರ ನಿಗಾ ಘಟಕದಲ್ಲೇ ಚಿಕಿತ್ಸೆ: ವೈದ್ಯರ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ​​ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​​ ಅವರಿಗೆ ತೀವ್ರ ನಿಗಾ ಘಟಕದಲ್ಲೇ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಬ್ರೀಚ್​ ಕ್ಯಾಂಡಿ ಆಸ್ಪತ್ರೆ ವೈದ್ಯ ಡಾ.ಪ್ರತೀತ್​ ಸಮಧಾನಿ ಮಾಹಿತಿ ನೀಡಿದ್ದು, ತೀವ್ರ ನಿಗಾ ಘಟಕದಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಇನ್ನೂ ಕೆಲ ದಿನಗಳ ಕಾಲ ಕಾಯ್ದು ನೋಡಬೇಕಾಗಿದೆ. ಅವರ ಚೇತರಿಕೆಗಾಗಿ ಎಲ್ಲರೂ ಪ್ರಾರ್ಥಿಸಿ ಎಂದು ತಿಳಿಸಿದ್ದಾರೆ.
ಅವರು ಕೋವಿಡ್​ ಜೊತೆಗೆ ನ್ಯುಮೋನಿಯಾದಿಂದಲೂ ಬಳಲುತ್ತಿರುವ ಕಾರಣ ಕೆಲ ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಯಲಿದೆ.
ಮುಂಬೈನ ಪ್ರತಿಷ್ಠಿತ ಬೀಚ್ ಕ್ಯಾಂಡಿ ಆಸ್ಪತ್ರೆಗೆ ಜ.11ರಂದು ಲತಾ ಮಂಗೇಶ್ಕರ್ ಅವರನ್ನು ದಾಖಲಾಗಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!